ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಗೌರವ ಧನ ಹೆಚ್ಚಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು..

protest against state government
ಆಶಾ ಕಾರ್ಯಕರ್ತೆಯರ ಪ್ರತಿಭಟನೆ

By

Published : Jun 30, 2020, 7:42 PM IST

ಸುರಪುರ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ತಹಶೀಲ್ದಾರ್​ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಪುಷ್ಪಲತಾ ಮಾತನಾಡಿ, ಇಂದು ನಾವು ಜೀವದ ಹಂಗು ತೊರೆದು ಕೋವಿಡ್-19 ನಿರ್ಮೂಲನೆಗಾಗಿ ಹೋರಾಡುತ್ತಿದ್ದೇವೆ. ಹೀಗಾಗಿ, ನಮ್ಮ ಜೀವದ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತರು..

ರಾಜ್ಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಗೌರವ ಧನಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅದು ನಮ್ಮ ಕುಟುಂಬ ನಿರ್ವಹಣೆಗೆ ಸಾಕಾಗದು. ಆದ್ದರಿಂದ ಕನಿಷ್ಠ 12 ಸಾವಿರ ತಿಂಗಳ ಗೌರವ ಧನ ನೀಡಬೇಕು. ಅಲ್ಲದೆ, ನಮಗೆ ಹೆಚ್ಚಿನ ಜೀವರಕ್ಷಕ ಸಲಕರಣೆಗಳನ್ನು ನೀಡಬೇಕೆಂದು ಆಗ್ರಹಿಸಿದರು. ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಅವರಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details