ಗುರುಮಠಕಲ್: ಮಾಸಿಕ ಗೌರವ ಧನ ₹ 12 ಸಾವಿರ ಖಾತರಿಪಡಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುಮಠಕಲ್ ತಾಲೂಕು ಆರೋಗ್ಯ ಕೇಂದ್ರದ ಬಳಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ ಆಶಾ ಕಾರ್ಯಕರ್ತೆಯರು, ತಾಲೂಕು ವೈದ್ಯಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಗುರುಮಠಕಲ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಆರಂಭಿಸಿದ ಆಶಾ ಕಾರ್ಯಕರ್ತೆಯರು
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುರುಮಠಕಲ್ ತಾಲೂಕು ಆರೋಗ್ಯ ಕೇಂದ್ರದ ಬಳಿ ಮುಷ್ಕರ ಆರಂಭಿಸಿದ ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕೊರೊನಾ ವಿರುದ್ಧ ಹೋರಾಟದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿರುವುದಕ್ಕೆ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೆಚ್ಚುಗೆ ವ್ಯಕ್ತಪಡಿಸಿದೆ. 42,000 ಸಾವಿರ ಕಾರ್ಯಕರ್ತೆಯರು ಈ ಸೇವೆಯಲ್ಲಿ ತೊಡಗಿದ್ದಾರೆ. ಆದರೆ, ಸರ್ಕಾರ ನಮಗೆ ಯಾವುದೇ ರೀತಿಯ ಸೌಲಭ್ಯಗಳನ್ನು ಒದಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಈಗ ಸರ್ಕಾರ ನೀಡುವ ಸಹಾಯಧನ ಅವೈಜ್ಞಾನಿಕವಾಗಿದೆ. ಕೂಡಲೇ ಅದನ್ನು ₹12 ಸಾವಿರಕ್ಕೆ ಏರಿಸಿ ಕಾಲಕಾಲಕ್ಕೆ ಸರಿಯಾಗಿ ವೇತನವನ್ನು ಪಾವತಿಸಬೇಕು. ಜೊತೆಗೆ ಕೋವಿಡ್- 19 ವಿರುದ್ಧ ಹೋರಾಟಕ್ಕೆ ಅಗತ್ಯವಿರುವ ಸುರಕ್ಷಿತ ಸಾಮಗ್ರಿಗಳನ್ನು ನೀಡಬೇಕು ಎಂದು ಆಗ್ರಹಿಸಿದರು.