ಯಾದಗಿರಿ: ಭೂ ಸುಧಾರಣೆ ಸೇರಿದಂತೆ ವಿವಿಧ ಕಾಯ್ದೆ ತಿದ್ದುಪಡಿ ವಿರೋಧಿಸಿ ಯಾದಗಿರಿಯಲ್ಲಿಂದು ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾದಗಿರಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಬಿಜೆಪಿ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ರೈತ ಹಾಗೂ ಕಾರ್ಮಿಕ ವಿರೋಧಿ, ಭೂಸುಧಾರಣೆ, ಎಪಿಎಮ್ಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿದರು.