ಸುರಪುರ:ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ, ಉತ್ತಮ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಸಿಪಿಐಎಂ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸುರಪುರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ, ಸಿಪಿಐಎಂನ ಅನೇಕ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಎಂ ಮುಖಂಡರು, ಕೇಂದ್ರ ಸರ್ಕಾರ ಉತ್ತಮ ಆಡಳಿತ ನೀಡಿದೆ ಎಂದು ಅನೇಕರು ಮಾಧ್ಯಮಗಳ ಚರ್ಚೆಗಳಲ್ಲಿ ಭಾಗವಹಿಸಿ ಮಾತನಾಡುತ್ತಾರೆ. ಆದರೆ ವಾಸ್ತವದಲ್ಲಿ ನರೇಂದ್ರ ಮೋದಿಯವರ ಸರಕಾರ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.