ಕರ್ನಾಟಕ

karnataka

ETV Bharat / state

ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯ - surapura news

ಸರಕಾರ ಕೂಡಲೇ ರೈತರ ಪ್ರತಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು. ಭತ್ತ ಕಟಾವು ಯಂತ್ರದ ದರವನ್ನು ಗಂಟೆಗೆ ಸಾವಿರದ ಎಂಟು ನೂರಕ್ಕಿಂತಲೂ ಕಡಿಮೆಗೊಳಿಸಬೇಕು. ಭತ್ತ ಖರೀದಿ ಕೇಂದ್ರ ಆರಂಭಿಸಬೇಕು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿದರು.

protest
protest

By

Published : Nov 3, 2020, 10:29 PM IST

ಸುರಪುರ (ಯಾದಗಿರಿ): ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸದ್ಯರು ಹುಣಸಗಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಸಂಘದ ರಾಜ್ಯ ಮಹಿಳಾ ವಿಭಾಗದ ಕಾರ್ಯದರ್ಶಿ ಮಹಾದೇವಿ ಬೇನಾಳಮಠ ಮಾತನಾಡಿ,ಸ ರಕಾರಗಳು ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಇದರಿಂದಾಗಿ ಇಂದು ರೈತರು ಕೃಷಿಯನ್ನು ನಡೆಸಲಾಗದೆ ಆತ್ಮಹತ್ಯೆಗೆ ಶರಣಾಗುವ ಸ್ಥಿತಿಗೆ ಬಂದು ತಲುಪಿದ್ದಾರೆ. ನಿತ್ಯವೂ ನೂರಾರು ರೈತರು ಆತ್ಮಹತ್ಯೆಗೆ ಶರಣಾದರೂ ಸರ್ಕಾರಗಳು ಸರಿಯಾದ ಪರಿಹಾರಗಳನ್ನು ಕೂಡ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದಿಂದ ಪ್ರತಿಭಟನೆ

ಸರಕಾರ ಕೂಡಲೇ ರೈತರ ಪ್ರತಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು. ಭತ್ತ ಕಟಾವು ಯಂತ್ರದ ದರವನ್ನು ಗಂಟೆಗೆ ಸಾವಿರದ ಎಂಟು ನೂರಕ್ಕಿಂತಲೂ ಕಡಿಮೆಗೊಳಿಸಬೇಕು. ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಮುಂಬರುವ ರೈತ ಹುತಾತ್ಮ ದಿನವನ್ನು ಎಲ್ಲಾ ಕಚೇರಿಗಳಲ್ಲಿ ಆಚರಣೆ ಮಾಡುವಂತೆ ಆದೇಶ ಹೊರಡಿಸಬೇಕು ಎಂಬುದು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿದರು.

ನಂತರ ತಹಶೀಲ್ದಾರ್ ವಿನಯ್ ಕುಮಾರ್ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಅಯ್ಯಣ್ಣ ಹಾಲಬಾವಿ, ಸುರಪುರ ತಾಲೂಕು ಅಧ್ಯಕ್ಷ ಹಣಮಂತ್ರಾಯ ಮಡಿವಾಳ, ಹುಣಸಗಿ ತಾಲೂಕು ಅಧ್ಯಕ್ಷ ರುದ್ಲಣ್ಣ ಭೇಟಿ ಸೇರಿದಂತೆ ಅನೇಕ ರೈತರು ಭಾಗಿಯಾಗಿದ್ದರು.

ABOUT THE AUTHOR

...view details