ಸುರಪುರ: ಉತ್ತರ ಪ್ರದೇಶದಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಸಾಮೂಹಿಕ ಸಂಘಟನೆಗಳ ವೇದಿಕೆ ವತಿಯಿಂದ ಸುರಪುರ ಬಂದ್ ಆಚರಿಸಲಾಗುತ್ತಿದೆ.
ಸಾಮೂಹಿಕ ಸಂಘಟನೆಗಳ ವೇದಿಕೆ ಈ ಹಿಂದೆ ಕರೆ ನೀಡಿದಂತೆ ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯ ಯುವತಿ ಮೇಲಿನ ಅತ್ಯಾಚಾರ ಖಂಡಿಸಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ಪ್ರತಿಭಟನೆಯ ಅಂಗವಾಗಿ ಬೆಳಗ್ಗೆಯಿಂದ ನಗರದ ಎಲ್ಲಾ ವ್ಯಾಪಾರಸ್ಥರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.
ವಿವಿಧ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಆವರಣದ ಬಳಿ ಸೇರಿ ನಂತರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಘಟನೆಯ ಅತ್ಯಾಚಾರಿಗಳು ಮತ್ತು ಅಲ್ಲಿಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.