ಸುರಪುರ (ಯಾದಗಿರಿ):ತಾಲೂಕಿನ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಬಸ್ ಡಿಪೋ ಮುಂದೆ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಸರ್ಕಾರ ಜನರವರಿ 1ರಿಂದ ಶಾಲಾ-ಕಾಲೇಜು ಆರಂಭಿಸಿದೆ. ಆದರೆ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಗ್ರಾಮೀಣ ಭಾಗಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಜೊತೆಗೆ ಸುರಪುರದಿಂದ ಕಲಬುರಗಿಗೆ ಹೋಗಲು ಬಸ್ ಸಂಖ್ಯೆ ಹೆಚ್ಚಿಸಬೇಕು.