ಕರ್ನಾಟಕ

karnataka

ETV Bharat / state

ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

By

Published : Jul 19, 2019, 8:02 PM IST

ಯಾದಗಿರಿ:ಯಾದಗಿರಿ ತಾಲೂಕಿನ ಚಾಮನಳ್ಳಿ, ಹೋರಂಚಾ ಗ್ರಾಮಗಳಲ್ಲಿ ಭೂಸ್ವಾಧೀನ ಇಲಾಖೆ ಅಧಿಕಾರಿಗಳು ಜಮೀನು ವಶಪಡಿಸಿಕೊಂಡು ಹಲವು ದಿನಗಳೇ ಕಳೆದಿದ್ರೂ ಕೂಡ ಯಾವುದೇ ಪರಿಹಾರ ನೀಡದಿರುವುದನ್ನು ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯ್ತು.

ರೈತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಜಿಲ್ಲೆಯ ಅಭಿವೃದ್ಧಿಪಡಿಸಲು ಏತ ನೀರಾವರಿ ಕಾಲುವೆಯ ನಿರ್ಮಾಣಕ್ಕಾಗಿ ಅನ್ನದಾತರು ತಮ್ಮ ಜಮೀನನ್ನು ಭೂಸ್ವಾಧೀನ ಅಧಿಕಾರಿಗಳಿಗೆ ಯಾವುದೇ ತಕರಾರಿಲ್ಲದೆ ನೀಡಿದ್ದರು. ಅದ್ರೆ ಈದೀಗ ಭೂಸ್ವಾಧೀನ ಅಧಿಕಾರಿಗಳು ರೈತರ ಜಮೀನುಗಳಿಗೆ ಪರಿಹಾರ ‌ನೀಡದೆ ಸತಾಯಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್​ರ ಮುಂದೆ ಅಸಮಾಧಾನ ಹೊರಹಾಕಿದರು.

ಜಿಲ್ಲೆಯಲ್ಲಿ ಭೀಕರ ಬರಗಾಲ ಉದ್ಭವಿಸಿದ್ರೂ ಕೂಡ ಭೂಸ್ವಾಧೀನ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ರೈತರ ಜಮೀನನ್ನು ಕಸಿದುಕೊಂಡಿರುವ ಅಧಿಕಾರಿಗಳು ಆದಷ್ಟು ಬೇಗ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

For All Latest Updates

TAGGED:

ABOUT THE AUTHOR

...view details