ಸುರಪುರ:ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಯುವ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ಇದರ ನೇತೃತ್ವವನ್ನು ಯುವ ಘಟಕದ ಜಿಲ್ಲಾಧ್ಯಕ್ಷ ಮಲ್ಲು ದಂಡಿನ್ ವಹಿಸಿದ್ದರು.
ಬಳಿಕ ಮಾತನಾಡಿದ ಅವರು, ಕಿತ್ತೂರು ಸಂಸ್ಥಾನದ ರಾಣಿ ಚೆನ್ನಮ್ಮನ ಬಲಗೈ ಬಂಟನಂತಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೋರಾಟದ ಫಲದಿಂದಾಗಿ ದೇಶದಲ್ಲಿ ಸ್ವಾತಂತ್ರ್ಯ ಹೋರಾಟ ಚಳುವಳಿ ಆರಂಭವಾಗಿದ್ದು. ಅಂತಹ ಹುತಾತ್ಮ ರಾಯಣ್ಣನ ಮೂರ್ತಿಯನ್ನು ಪೀರನವಾಡಿಯಲ್ಲಿ ಕುಂಟು ನೆಪ ಹೇಳಿ ತೆರವುಗೊಳಿಸಿರುವುದು ಸರಿಯಲ್ಲ. ಇದು ರಾಯಣ್ಣನಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನವಾಗಿದೆ ಎಂದರು.