ಕರ್ನಾಟಕ

karnataka

ETV Bharat / state

ಕೃಷಿ ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ - Surapur protest news

ಕೃಷಿ ಕೂಲಿಕಾರರಿಗೆ ಮಾರಕವಾಗುವ ಎಪಿಎಂಸಿ, ಭೂ ಸುಧಾರಣಾ ಕಾಯ್ದೆಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಅಖಿಲ ಭಾರತ ಕೃಷಿ ಕೂಲಿಕಾರರ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Protest demanding the fulfillment of agricultural laborers
ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

By

Published : Aug 10, 2020, 7:05 PM IST

ಸುರಪುರ (ಯಾದಗಿರಿ):ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಸುರಪುರ ನಗರದ ತಹಶೀಲ್ದಾರ್​ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ದವಲಸಾಬ್ ನದಾಫ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ಜನ ಪ್ರತಿಭಟನಾಕಾರರು ಭಾಗವಹಿಸಿದ್ದರು. ಈ ವೇಳೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಮಿತಿ ಮುಖಂಡರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೇವಲ ಹುಸಿ ಭರವಸೆಗಳನ್ನು ನೀಡುತ್ತ ಕಾಲಹರಣ ನಡೆಸಿವೆ. ಸರ್ಕಾರಗಳಿಗೆ ದೇಶದ ಕೃಷಿ ಕೂಲಿಕಾರರು ಹಾಗೂ ಮಹಿಳೆಯರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಕೊರೊನಾ ಸೋಂಕಿನ ಹೋರಾಟದ ಬಗ್ಗೆ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ. ಆದರೆ, ದೇಶದಲ್ಲಿ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದು, ಲಕ್ಷಾಂತರ ಜನರಿಗೆ ಸೋಂಕು ತಗುಲಿದೆ. ಆಡಳಿತ ನಡೆಸುವವರು ಕೊರೊನಾ ನಿಯಂತ್ರಣದ ಬದಲು ಹಣ ನುಂಗುತ್ತಿದ್ದಾರೆ.

ಈಗ ಮಂದಿರ ಕಟ್ಟುವ ವಿಷಯದ ಮೂಲಕ ದೇಶದ ಜನರ ಮದ್ಯೆ ಬಿರುಕು ಮೂಡಿಸುವ ಕೆಲಸ ನಡೆದಿದೆ. ಮಂದಿರ ಕಟ್ಟುವ ಬದಲು ಅಲ್ಲೊಂದು ಆಸ್ಪತ್ರೆ ಕಟ್ಟಿಸಿದರೆ, ದೇಶದಲ್ಲಿ ಕೊರೊನಾ ಸೋಂಕಿತರನ್ನು ಗುಣಪಡಿಸಬಹುದಿತ್ತು. ಹಸಿರು ಟವೆಲ್ ಹಾಕಿಕೊಂಡು ನಾನು ರೈತರ ಪರ ಎಂದು ಹೇಳಿದ ಮುಖ್ಯಮಂತ್ರಿ, ಈಗ ಭೂಸುಧಾರಣೆ ಕಾಯಿದೆ, ಎಪಿಎಂಸಿ ಕಾಯಿದೆ ಕಾಯ್ದೆಗಳನ್ನು ಜಾರಿಗೆ ತಂದು ರೈತರನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಎಲ್ಲಾ ಕಾಯಿದೆಗಳನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು. ದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ನೀಡುವಲ್ಲಿ ಯೋಜನೆ ರೂಪಿಸಬೇಕು. ಪ್ರತಿಯೊಬ್ಬ ಕಾರ್ಮಿಕನಿಗೆ ಮಾಸಿಕ 18 ಸಾವಿರ ರೂಪಾಯಿ ವೇತನ ನೀಡಬೇಕೆಂದು ಆಗ್ರಹಿಸಿದರು. ನಂತರ ತಮ್ಮ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಮೂಲಕ ಪ್ರಧಾನಮಂತ್ರಿಗೆ ಸಲ್ಲಿಸಿದರು.

ABOUT THE AUTHOR

...view details