ಗುರುಮಠಕಲ್: ಹೈದರಾಬಾದ್ನ ಸಯೀದಾಬಾದ್ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ತಾಲೂಕು ಅಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವತಿಯಿಂದ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಪಟ್ಟಣದ ಕನಕ ವೃತ್ತದ ಮೂಲಕ ಬಸ್‌ನಿಲ್ದಾಣ, ಅಂಬಿಗರ ಚೌಡಯ್ಯ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ತಹಶೀಲ್ ಕಚೇರಿ ವರೆಗೆ ಮೇಣದ ಬತ್ತಿ ಹಿಡಿದುಕೊಂಡು ತೆಲಂಗಾಣ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.