ಕರ್ನಾಟಕ

karnataka

ETV Bharat / state

ಹಥ್ರಾಸ್​​ ಅತ್ಯಾಚಾರ ಪ್ರಕರಣ: ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ - ಸುರಪುರದಲ್ಲಿ ಪ್ರತಿಭಟನೆ

ಉತ್ತರ ಪ್ರದೇಶದ ಹಥ್ರಾಸ್​​ ಅತ್ಯಾಚಾರ ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಇಂದು ಸುರಪುರದಲ್ಲಿ ಬೀದರ್ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಯಿತು.

protest in surpur  against Hatras rape case
ಪ್ರತಿಭಟನೆ

By

Published : Oct 5, 2020, 5:40 PM IST

ಸುರಪುರ/ಯಾದಗಿರಿ: ಉತ್ತರ ಪ್ರದೇಶದ ಹಥ್ರಾಸ್​​ ಅತ್ಯಾಚಾರ ಘಟನೆ ಖಂಡಿಸಿ ಸುರಪುರ ಬಂದ್ ಆಚರಿಸಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆ ನಡೆಸಲಾಯಿತು.

ಪ್ರತಿಭಟನೆ

ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲಿನ ಅತ್ಯಾಚಾರ ವಿರೋಧಿಸಿ ಸಾಮೂಹಿಕ ಸಂಘಟನೆಗಳ ವೇದಿಕೆಯಿಂದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಬೀದರ್ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಸುರಪುರ ನಗರದ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಬಂದ್ ಮಾಡಿ ಪ್ರತಿಭಟಿಸಿದರು.

ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ, ಹಥ್ರಾಸ್​ ಜಿಲ್ಲೆಯಲ್ಲಿ ಯುವತಿಯನ್ನು ಕಾಮುಕರು ಅತ್ಯಾಚಾರ ಮಾಡಿ ಕೊಲೆ ಮಾಡಿರುವುದನ್ನು ಉಗ್ರವಾಗಿ ಖಂಡಿಸುತ್ತೇವೆ. ಉತ್ತರ ಪ್ರದೇಶದ ಸರಕಾರ ಈ ಘಟನೆಯನ್ನು ನಿರ್ಲಕ್ಷ್ಯಿಸುತ್ತಿರುವುದು ಅಸಹನೀಯ. ಕೂಡಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು, ಅತ್ಯಾಚಾರಿಗಳನ್ನು ಮರಣದಂಡನೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. ನಂತರ ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಸಲ್ಲಿಸಿದರು.

ABOUT THE AUTHOR

...view details