ಕರ್ನಾಟಕ

karnataka

ETV Bharat / state

ಖಾಸಗಿ ಶಾಲೆಗಳಿಗೆ ಅನುದಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - Gurumithkal kasa math shree news

ಗುರುಮಠಕಲ್ ಪಟ್ಟಣದ ಖಾಸ ಮಠದ ಶ್ರೀಗಳ ನೇತೃತ್ವದಲ್ಲಿ ಖಾಸಗಿ ಶಾಲೆಗಳಿಗೆ ಸರ್ಕಾರ ಅನುದಾನ ನೀಡುವಂತೆ ಆಗ್ರಹಿಸಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

Protest
Protest

By

Published : Sep 20, 2020, 1:02 PM IST

ಯಾದಗಿರಿ: 1995 ರ ನಂತರ ಆರಂಭವಾದ ಖಾಸಗಿ ಶಾಲೆಗಳಿಗೆ ಸರ್ಕಾರ ಅನುದಾನ ನೀಡುವಂತೆ ಆಗ್ರಹಿಸಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.

ಗುರುಮಠಕಲ್ ಪಟ್ಟಣದ ಖಾಸ ಮಠದ ಶ್ರೀಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಕೊರೊನಾ ಹಿನ್ನೆಲೆ ಅಸಂಘಟಿತ ಕಾರ್ಮಿಕರ ನೆರವಿಗೆ ನಿಂತ ಸರ್ಕಾರ ಖಾಸಗಿ ಶಾಲೆಯ ಶಿಕ್ಷಕರ ಬಗ್ಗೆ ಚಿಂತಿಸದಿರುವುದು ಅತ್ಯಂತ ದುರಂತ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಕೂಡ್ಲೆ ಖಾಸಗಿ ಶಾಲೆಗಳಿಗೆ ಸರ್ಕಾರ ಅನುದಾನ ನೀಡುವಂತೆ ಸೂಚಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details