ಸುರಪುರ (ಯಾದಗಿರಿ):ಅಂಬೇಡ್ಕರ್ ನಿವಾಸದ ಮೇಲೆ ದಾಳಿ ವಿರೋಧಿಸಿ ತಾಲೂಕಿನ ಕೆಂಭಾವಿ ಹೋಬಳಿಯ ಉಪ ತಹಶೀಲ್ದಾರ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ಸದಸ್ಯರು ಪ್ರತಿಭಟನೆ ನಡೆಸಿದರು.
ಮುಂಬೈನ ದಾದರ್ನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮನೆಯ ಮೇಲೆ ದಾಂಧಲೆ ನಡೆಸಿದ ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ನಿವಾಸದ ಮೇಲೆ ದಾಳಿ ಮಾಡಿದವರ ಗಡಿಪಾರಿಗೆ ಆಗ್ರಹ ಈ ಸಂದರ್ಭದಲ್ಲಿ ಮುಖಂಡರು ಮಾತನಾಡಿ, ಮುಂಬೈನ ದಾದರ್ನಲ್ಲಿರುವ ರಾಜಗೃಹ ಮನೆಯ ಕಿಟಕಿ, ಬಾಗಿಲುಗಳನ್ನು ಧ್ವಂಸಮಾಡಿದ್ದಲ್ಲದೆ ಸಿಸಿಟಿವಿ ಪರಿಕರಗಳನ್ನು ಧ್ವಂಸ ಮಾಡಿ ಬಾಬಾ ಸಾಹೇಬರ ಅನುಯಾಯಿಗಳಿಗೆ ನೋವುಂಟು ಮಾಡಿದ್ದಾರೆ.
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮನೆಯ ಮೇಲೆ ನಡೆಸಿದ ದಾಂಧಲೆ ಇಡೀ ಭಾರತದ ಸಂವಿಧಾನ ಪ್ರಿಯರ ಮೇಲೆ ನಡೆದ ಹಲ್ಲೆಯಾಗಿದೆ. ಆದ್ದರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೂಡಲೇ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಮತ್ತು ಅಂಬೇಡ್ಕರ್ ಅವರ ಮನೆಗೆ ಬಿಗಿ ಭದ್ರತೆ ನೀಡಬೇಕೆಂದು ಒತ್ತಾಯಿಸುತ್ತೇವೆ ಎಂದರು.