ಯಾದಗಿರಿ: ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಪರಿಹಾರ ಧನವನ್ನು ಕೂಡಲೇ ಒದಗಿಸುವಂತೆ ಒತ್ತಾಯಿಸಿ ಜಿಲ್ಲೆಯಲ್ಲಿಂದು ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘವು AIUTUC ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ, ಅರ್ಜಿ ಸಲ್ಲಿಸಿದ ಜಿಲ್ಲೆಯ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಸಹಾಯಧನದ ರೂ. 5 ಸಾವಿರವನ್ನು ಅವರ ಬ್ಯಾಂಕ್ ಖಾತೆಗೆ ಸಂದಾಯ ಮಾಡಬೇಕೆಂದು ಆಗ್ರಹಿಸಿದರು.
AIUTUC ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದಿಂದಪ್ರತಿಭಟನೆ ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾದ ಕಟ್ಟಡ ಕಾರ್ಮಿಕರಿಗೆ ಸರ್ಕಾರ ಸಹಯಧನ ನೀಡುವುದಾಗಿ ಘೋಷಿಸಿ ಎರಡು ತಿಂಗಳು ಕಳೆದರೂ ಕೂಡ ಅವರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಕಟ್ಟಡ ಕಾರ್ಮಿಕರ ಈ ಬೇಡಿಕೆ ಈಡೇರಬೇಕಿದೆ ಎಂದು ಪ್ರತಿಭಟನೆ ಮೂಲಕ ಒತ್ತಾಯಿಸಲಾಯಿತು.
ಕೊರೊನಾ ಭೀತಿ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಮನೆ ಸೇರಿದಂತೆ ಕಾರ್ಮಿಕರಿಗೆ ಸಹಾಯಧನ ನೀಡಬೇಕೆಂದು ಪ್ರತಿಭಟನಾ ನಿರತರು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮೂಲಕ ರಾಜ್ಯ ಕಾರ್ಮಿಕ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.