ಯಾದಗಿರಿ:ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಸರ್ಕಾರ ಶೀಘ್ರವಾಗಿ ಪರಿಹರಿಬೇಕು ಎಂದು ಒತ್ತಾಯಿಸಿ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘ ಮತ್ತು ಎಐಯುಟಿಸಿ ಸದಸ್ಯರು ಯಾದಗಿರಿಯ ಪ್ರತಿಭಟನೆ ನಡೆಸಿದರು.
ಬಾಕಿ ವೇತನ ಪಾವತಿಗೆ ಆಗ್ರಹಿಸಿ ಯಾದಗಿರಿಯಲ್ಲಿ ವಸತಿನಿಲಯ ಕಾರ್ಮಿಕರ ಧರಣಿ - State Federal Residential Workers Union
ಜಿಲ್ಲಾ ಪಂಚಾಯಿತಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ, ಹಾಸ್ಟೆಲ್, ವಸತಿ ಶಾಲೆ ಮತ್ತು ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಿವಂತೆ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ ಮತ್ತು ಎಐಯುಟಿಸಿ ಒತ್ತಾಯಿಸಿತು.
ಜಿಲ್ಲಾ ಪಂಚಾಯಿತಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ, ಹಾಸ್ಟೆಲ್, ವಸತಿ ಶಾಲೆ ಮತ್ತು ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಿವಂತೆ ಆಗ್ರಹಿಸಿದರು. ಹೊರ ಗುತ್ತಿಗೆ ಕಾರ್ಮಿಕರು ಹಲವು ವರ್ಷಗಳಿಂದ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ವಿವಿಧ ಇಲಾಖೆಗಳ ಕಾರ್ಮಿಕರ ವೇತನ 5-6 ತಿಂಗಳಿಂದ ಬಾಕಿ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್ಡೌನ್ ಅವಧಿಯಲ್ಲಿ ಎಲ್ಲಾ ಗುತ್ತಿಗೆ ಕಾರ್ಮಿಕರಿಗೆ ವೇತನ ನೀಡಬೇಕು ಎಂದು ಸುತ್ತೋಲೆ ಹೊರಡಿಸಿವೆ. ಆದರೆ, ಕೆಲ ಅಧಿಕಾರಿಗಳು ಕೆಲಸ ಮಾಡಿದವರಿಗೆ ಮಾತ್ರ ಸಂಬಳ ಕೊಡುತ್ತಿದ್ದಾರೆ. ಕೆಲವು ಕಡೆ ಪ್ರಿಮೆಟ್ರಿಕ್ ಹೊರತುಪಡಿಸಿ ಇತರರಿಗೆ ನೀಡಿದ್ದಾರೆ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.