ಯಾದಗಿರಿ:ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುವ ನೂರಾರು ವಲಸೆ ಕಾರ್ಮಿಕರನ್ನು ಸ್ಕ್ರೀನಿಂಗ್ ಟೆಸ್ಟ್ ಬಳಿಕ ವಿವಿಧ ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗುತ್ತಿದೆ. ಆದರೆ ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರಿಗೆ ಯಾವುದೇ ಮೂಲಭೂತ ಸೌಕರ್ಯ ದೊರಕುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಶಹಪುರ ಕ್ವಾರಂಟೈನ್ ಕೇಂದ್ರದಲ್ಲಿ ಅವ್ಯವಸ್ಥೆ ಆರೋಪ: ಕ್ವಾರಂಟೈನಿಗಳ ಆಕ್ರೋಶ
ಯಾದಗಿರಿ ಜಿಲ್ಲಾಡಳಿತದ ವತಿಯಿಂದ ಶಹಪುರ ಕ್ವಾರಂಟೈನ್ ಕೇಂದ್ರದಲ್ಲಿರುವ ಕಾರ್ಮಿಕರಿಗೆ ಯಾವುದೇ ಮೂಲಭೂತ ಸೌಕರ್ಯಗಳು ದೊರಕುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಮಹಾರಾಷ್ಟ್ರದ ವಿವಿಧ ಭಾಗಗಳಿಂದ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಮೂಲಕ ಇತ್ತೀಚೆಗೆ ಆಗಮಿಸಿರುವ ನೂರಕ್ಕೂ ಹೆಚ್ಚು ಕಾರ್ಮಿಕರನ್ನು ಶಹಪುರ ನಗರದ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ, ಈ ಕೇಂದ್ರಗಳಲ್ಲಿ ಮಾತ್ರ ಜಿಲ್ಲಾಡಳಿತ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂಬ ಆರೋಪಿಸಲಾಗಿದೆ.
ಅಧಿಕಾರಿಗಳು ನಮಗೆ ಸರಿಯಾಗಿ ಊಟ, ನೀರು ಸೇರಿದಂತೆ ಅಗತ್ಯ ವಸ್ತುಗಳನ್ನ ಪೂರೈಸದೆ ನಾವು ನರಕಯಾತನೆ ಅನುಭವಿಸುವಂತಾಗಿದೆ. ಕ್ವಾರಂಟೈನ್ ಮಾಡುವ ಮುನ್ನ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ಭರವಸೆ ನೀಡಲಾಗಿತ್ತು. ಆದರೆ, ಈಗ ಅಧಿಕಾರಿಗಳು ತಮ್ಮ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಕೊನೆಯಪಕ್ಷ ನಮ್ಮನ್ನು ನಮ್ಮ ಮನೆಗಳಿಗೆ ತೆರಳಲು ಬಿಡಿ ಎಂದು ಅಧಿಕಾರಿಗಳ ವಿರುದ್ಧ ಕ್ವಾರಂಟೈನ್ನಲ್ಲಿರುವವರು ಆಕ್ರೋಶ ವ್ಯಕ್ತಪಡಿಸಿದರು.