ಸುರಪುರ:ಬೆಳಗಾವಿ ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಪ್ರತಿಷ್ಠಾಪನೆಗೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಸುರಪುರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸಂಘಟನೆಯ ನಗರ ಘಟಕದ ಕಾರ್ಯಾಧ್ಯಕ್ಷ ಯಲ್ಲಪ್ಪ ಕಲ್ಲೋಡಿ ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯ ದೊರೆಯಲೆಂದು ಮೊದಲು ಹೋರಾಟ ನಡೆಸಿದ ಕಿತ್ತೂರು ಸಂಸ್ಥಾನದ ಸೈನಿಕ ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದರು. ಅವರು ಆರಂಭಿಸಿದ ಸ್ವಾತಂತ್ರ್ಯ ಹೋರಾಟ ನಂತರದ ಎಲ್ಲಾ ಹೋರಾಟಗಾರರಿಗೆ ಸ್ಫೂರ್ತಿಯಾಗಿದೆ.