ಸುರಪುರ: ನಗರ ಆರೋಗ್ಯ ಕೇಂದ್ರಕ್ಕೆ ಶಾಸಕ ರಾಜುಗೌಡ ಭೇಟಿ ನೀಡಿ ಕೊರೊನಾ ಸೊಂಕು ಪರೀಕ್ಷಾ ಕೇಂದ್ರ ಪರಿಶೀಲಿಸಿದರು. ಜನರು ಕೊರೊನಾ ಸೊಂಕಿನಿಂದ ದೂರವಿರಲು ಮನೆಯಿಂದ ಹೊರಗೆ ಬರಬೇಡಿ. ಯುವಕರು ಅನಾವಶ್ಯಕವಾಗಿ ಹೊರಗೆ ಬರಬೇಡಿ, ಯಾರಾದರೂ ಸುಳ್ಳು ಸುದ್ದಿ ಜಾಲತಾಣಗಳಲ್ಲಿ ಹರಿಬಿಟ್ಟರೆ ಅಂತಹವರ ವಿರುದ್ಧ ಕೇಸು ದಾಖಲಿಸುವಂತೆ ಸೂಚಿಸಿದರು.
ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪರೀಕ್ಷಾ ಕೇಂದ್ರ ಪರಿಶೀಲಿಸಿದ ಶಾಸಕ
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಆಸ್ಪತ್ರೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯ ಸೌಲಭ್ಯಗಳಿವೆಯೇ ಎಂಬುದನ್ನು ಪರೀಕ್ಷಿಸಲು ಸುರಪುರದ ಆರೋಗ್ಯ ಕೇಂದ್ರಕ್ಕೆ ಶಾಸಕ ರಾಜುಗೌಡ ಭೇಟಿ ನೀಡಿದ್ದರು.
ಅಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸೋಂಕು ಪರೀಕ್ಷಾ ಕೇಂದ್ರ ಪರಿಶೀಲಿಸಿದ ಶಾಸಕ ರಾಜುಗೌಡ
ಖಾಸಗಿ ವೈದ್ಯರು ಯಾವುದೇ ಕಾರಣಕ್ಕೂ ಆಸ್ಪತ್ರೆ ಬಂದ್ ಮಾಡಬೇಡಿ ಎಂದು ವಿನಂತಿಸಿದರು. ಇದೇ ವೇಳೆ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ, ಆರ್.ವಿ.ನಾಯಕ ತಾಲೂಕಿನಲ್ಲಿ ಗೋವಾ ಮಹಾರಾಷ್ಟ್ರ ಬೆಂಗಳೂರು ಕಡೆಗೆ ಗುಳೆ ಹೋದವರು ಸುಮಾರು 10 ಸಾವಿರ ಜನ ಬಂದಿದ್ದಾರೆ. ಎಲ್ಲರನ್ನು ಪರೀಕ್ಷಿಸಲಾಗುತ್ತದೆ. ಈಗಾಗಲೇ ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದೆ. ಜನರು ಸ್ವಲ್ಪ ಆರೋಗ್ಯದ ಸಮಸ್ಯೆ ಕಂಡಲ್ಲಿ ಕೂಡಲೆ ಆಸ್ಪತ್ರೆಗೆ ಬರಲು ತಿಳಿಸಿದರು.