ಸುರಪುರ (ಯಾದಗಿರಿ):ಹುಣಸಗಿ ತಾಲೂಕಿನ ಮೇಲಿನಗಡ್ಡಿ, ದೇವರಗಡ್ಡಿ, ಹೊರಟ್ಟಿ ಕರೆಕಲ್ ಮುಂತಾದ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ರಾಜುಗೌಡ ಚಾಲನೆ ನೀಡಿದರು.
ಹುಣಸಗಿ ತಾಲೂಕಿನ ಗ್ರಾಮಗಳ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ರಾಜುಗೌಡ ಚಾಲನೆ - Cc road construction in hunasagi
ಹುಣಸಗಿ ತಾಲೂಕಿನ ಗ್ರಾಮಗಳಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಶಾಸಕ ರಾಜುಗೌಡ ಚಾಲನೆ ನೀಡಿದರು. ರಸ್ತೆ ನಿರ್ಮಾಣ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಪ್ರತೀ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಉತ್ತಮ ಕಾಮಗಾರಿ ನಿರ್ಮಿಸಿ. ಯಾವುದೇ ಕಾರಣಕ್ಕೂ ಕಳೆಪ ಗುಣಮಟ್ಟದ ಕಾಮಗಾರಿ ನಿರ್ಮಿಸಿದ್ದಲ್ಲಿ ಗುತ್ತಿಗೆದಾರರು ಮತ್ತು ಸಂಬಂಧಪಟ್ಟ ಇಂಜಿನಿಯರ್‌ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಸಿಸಿ ರಸ್ತೆಗಳ ಅವಶ್ಯಕತೆ ತುಂಬಾ ಇದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹೆಚ್.ಸಿ. ಪಾಟೀಲ್ ಸೇರಿದಂತೆ ಅನೇಕರು ಇದ್ದರು.