ಕರ್ನಾಟಕ

karnataka

ETV Bharat / state

ಬಸವಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ - ನೀರಾವರಿ ಮಂತ್ರಿ ರಮೇಶ್ ಜಾರಕಿಹೊಳಿ ಭೇಟಿ

ಕೆಬಿಜೆಎನ್‌ಎಲ್‌ ಎಡ ಮತ್ತು ಬಲದಂಡೆ ಕಾಲುವೆಗಳ ಸ್ಥಿಗತಿಗಳ ಬಗ್ಗೆ ಮಾಹಿತಿ ಪಡೆದ ಸಚಿವ ರಮೇಶ್​ ಜಾರಕಿಹೊಳಿ, ಮುಂದೆ ಮಾಡಬೇಕಾದ ಕಾಮಗಾರಿಗಳ ಕ್ರೀಯಾ ಯೋಜನೆ ಕುರಿತು ಭೀಮರಾಯನಗುಡಿ ಮತ್ತು ನಾರಾಯಣಪುರ ಝೋನ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

Ramesh Jarakiholi inspected the Basavasagar reservoir
ಬಸವಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ರಮೇಶ್ ಜಾರಕಿಹೊಳಿ..!

By

Published : May 5, 2020, 5:39 PM IST

ಸುರಪುರ: ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ನಾರಾಯಣಪುರ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕೆಬಿಜೆಎನ್‌ಎಲ್‌ ಎಡ ಮತ್ತು ಬಲದಂಡೆ ಕಾಲುವೆಗಳ ಸ್ಥಿಗತಿಗಳ ಬಗ್ಗೆ ಮಾಹಿತಿ ಪಡೆದರು. ಮುಂದೆ ಮಾಡಬೇಕಾದ ಕಾಮಗಾರಿಗಳ ಕ್ರೀಯಾ ಯೋಜನೆ ಕುರಿತು ಭೀಮರಾಯನಗುಡಿ ಮತ್ತು ನಾರಾಯಣಪುರ ಝೋನ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಸುರಪುರ ಶಾಸಕ ನರಸಿಂಹ ನಾಯಕ (ರಾಜುಗೌಡ), ದೇವದುರ್ಗ ಶಾಸಕ ಶಿವನಗೌಡ ನಾಯಕ, ರಾಯಚೂರು ಶಾಸಕ ಶಿವರಾಜ ಪಾಟೀಲ್, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಲಿಂಗಸುಗೂರು ಮಾಜಿ ಶಾಸಕ ಮಾನಪ್ಪ ವಜ್ಜಲ್ ಸೇರಿದಂತೆ ಅಧಿಕಾರಿಗಳಿದ್ದರು.

ABOUT THE AUTHOR

...view details