ಕರ್ನಾಟಕ

karnataka

ETV Bharat / state

ಬ್ಯಾರೇಜ್ ಕಾಮಗಾರಿ ಸ್ಥಳ ಪರಿಶೀಲಿಸಿದ ಸಚಿವ ರಮೇಶ್ ಜಾರಕಿಹೊಳಿ - Minister ramesh jarakiholi news

ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸುರಪುರ ತಾಲೂಕಿನ ತಿಂಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ಯಾರೇಜ್ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದರು.

Ramesh jarakiholi
Ramesh jarakiholi

By

Published : Jul 2, 2020, 4:27 PM IST

ಸುರಪುರ: ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸುರಪುರ ತಾಲೂಕಿನ ತಿಂಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ಯಾರೇಜ್ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದರು.

ಮಧ್ಯಾಹ್ನ ಮೂರು ಗಂಟೆ ವೇಳೆಗೆ ಆಗಮಿಸಿದ ಸಚಿವರು, ಕೃಷ್ಣಾ ನದಿ ಸಮೀಪ ಸ್ಥಳ ಪರಿಶೀಲನೆ ಜೊತೆಗೆ ಕಾಮಗಾರಿಯ ನಕ್ಷೆ ವೀಕ್ಷಿಸಿ ಬ್ಯಾರೇಜ್ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೃಷ್ಣಾ ನದಿಯಲ್ಲಿ ಬ್ರಿಡ್ಜ್​ ಕಮ್ ಬ್ಯಾರೇಜ್ ನಿರ್ಮಾಣದಿಂದ ಈ ಭಾಗದ ಜನರಿಗೆ ಹಲವಾರು ರೀತಿಯಲ್ಲಿ ಅನುಕೂಲವಾಗಲಿದೆ. ಆದಷ್ಟು ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details