ಯಾದಗಿರಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧಪ್ರತಿಪಕ್ಷದವರು ತಮ್ಮ ವೋಟ್ಬ್ಯಾಂಕ್ಗಾಗಿ ಮುಗ್ಧ ಜನರನ್ನು ಮುಂದಿಟ್ಟುಕೊಂಡು ಹೋರಾಟ ನಡೆಸ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆರೋಪಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಕೈಗೊಳ್ಳುವ ನಿರ್ಧಾರಗಳು ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥವು. ಪೌರತ್ವ ತಿದ್ದುಪಡಿ ಕಾಯ್ದೆ ಒಳ್ಳೆಯ ನಿರ್ಧಾರ. ಮೋದಿ ಅವರ ಈ ನಿರ್ಧಾರಕ್ಕೆ ಎಲ್ಲರೂ ಹೆಮ್ಮೆಪಡಬೇಕು ಎಂದರು.
ಭಾರತದ ಅಲ್ಪಸಂಖ್ಯಾತರಿಗೆ ಕೂದಲೆಳೆಯಷ್ಟು ತೊಂದರೆ ಇಲ್ಲ. ಕಾಯ್ದೆ ಬಗ್ಗೆಯಿರುವ ಗೊಂದಲವನ್ನ ಮೋದಿ ಅವರೇ ನಿವಾರಿಸಿದ್ದಾರೆ. ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಉದ್ದೇಶದಿಂದ ಈ ಗಲಭೆ ಸೃಷ್ಟಿಸಿ ಬಿಜೆಪಿಗೆ ಮುಜುಗರ ಉಂಟುಮಾಡುವ ಹುನ್ನಾರ ನಡೆದಿದೆ. ಪ್ರತಿಪಕ್ಷ ನಾಯಕರ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದು ಕಿಡಿಕಾರಿದರು.
ಮಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಗಲಭೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಈಗಾಗಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಪರಿಹಾರ ಹಣ ಘೋಷಿಸಿದ್ದಾರೆ ಎಂದು ತಿಳಿಸಿದರು.