ಸುರಪುರ :ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮನ ಜಯಂತಿಯನ್ನು ತಾಲೂಕಿನ ಹಾಗೂ ಹುಣಸಗಿಯ ರೆಡ್ಡಿ ಸಮುದಾಯದ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.
ದೇಶಾದ್ಯಂತ ಕೊರೊನಾ ವೈರಸ್ ಹಾವಳಿಯಿಂದ ಲಾಕ್‌ಡೌನ್ ಘೋಷಣೆಯಾಗಿದೆ. ಜನರು ತೀವ್ರ ಸಂಕಷ್ಟದಲ್ಲಿರುವುದರಿಂದ ಸರ್ಕಾರ ರಾಜ್ಯದ ಬಡ ಜನರ ನೆರವಿಗೆ ಬರಲೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ರೆಡ್ಡಿ ಸಮುದಾಯದ ಮುಖಂಡರು, ಈ ನಿಟ್ಟಿನಲ್ಲಿ ನಮ್ಮ ಸಮುದಾಯವೂ ಕೂಡ ಸರ್ಕಾರಕ್ಕೆ ನೆರವಾಗಲಿದೆ ಎಂದರು.
ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ ₹1 ಲಕ್ಷ ದೇಣಿಗೆ ನೀಡಿದ ರೆಡ್ಡಿ ಸಮಾಜ.. - ಹುಣಸಗಿ ಮತ್ತು ಸುರಪುರ ತಾಲೂಕಿನ ರೆಡ್ಡಿ ಸಮಾಜ
ಹುಣಸಗಿ ಮತ್ತು ಸುರಪುರ ತಾಲೂಕಿನ ರೆಡ್ಡಿ ಸಮಾಜದ ವತಿಯಿಂದ ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ 1 ಲಕ್ಷ ದೇಣಿಗೆ ನೀಡಲಾಗಿದೆ.

ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ 1 ಲಕ್ಷ ದೇಣಿಗೆ ನೀಡಿದ 'ರೆಡ್ಡಿ' ಸಮಾಜ
ಇದೇ ಸಂದರ್ಭದಲ್ಲಿ ಮಸಗಿ ತಹಶೀಲ್ದಾರ್ ಕಚೇರಿಗೆ ತೆರಳಿ ವಿನಯ್‌ಕುಮಾರ್ ಪಾಟೀಲ್ ಅವರ ಮೂಲಕ ಮುಖ್ಯಮಂತ್ರಿಗಳ ಕೊರೊನಾ ಪರಿಹಾರ ನಿಧಿಗೆ 1 ಲಕ್ಷ ರೂಪಾಯಿಯ ದೇಣಿಗೆ ಚೆಕ್ ನೀಡಿದರು.