ಯಾದಗಿರಿ:ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಸೆಪ್ಟೆಂಬರ್ 30ರ ವರೆಗೆ ಜಿಲ್ಲೆಯಾದ್ಯಂತ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿರುವ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಪೋಷಣಾ ಅಭಿಯಾನದ ಭಿತ್ತಿ ಪತ್ರಗಳನ್ನು ಜಿಲ್ಲಾಧಿಕಾರಿಗಳಾದ ಡಾ. ರಾಗಪ್ರಿಯಾ ಆರ್ ಅವರು ಬಿಡುಗಡೆ ಮಾಡಿದರು.
ಜಿಲ್ಲೆಯಲ್ಲಿ 5 ವರ್ಷದಳೊಗಿನ ತೀವ್ರ ಅಪೌಷ್ಠಿಕ ಮಕ್ಕಳನ್ನು ಗುರುತಿಸುವುದು. ಉನ್ನತ ಚಿಕಿತ್ಸೆಗೆ ಎನ್ಆರ್ಸಿ ಕೇಂದ್ರಗಳಿಗೆ ಹೆಚ್ಚಿನ ಚಿಕಿತ್ಸೆಗೆ ಕಳಿಸಿಕೊಡುವ ಮೂಲಕ ಮಕ್ಕಳು ಗಂಭೀರ ಸ್ಥಿತಿಗೆ ತಲುಪುವದನ್ನ ಕಡಿಮೆಗೊಳಿಸಬಹುದಾಗಿದೆ. ಆದ್ದರಿಂದ ತೀವ್ರ ಅಪೌಷ್ಟಿಕ ಮಕ್ಕಳನ್ನು ಗುರುತಿಸುವುದು ಮತ್ತು ಶಿಫಾರಸು ಸೇವೆಗಳನ್ನು ನೀಡುವುದು ಈ ವರ್ಷದ ಪೋಷಣ್ ಮಾಸಾಚರಣೆಯ ಒಂದು ಪ್ರಮುಖ ಉದ್ದೇಶವಾಗಿದೆ.
ಪ್ರತಿ ವರ್ಷದಂತೆ ಸೆಪ್ಟೆಂಬರ್ 2020ರ ತಿಂಗಳನ್ನು ರಾಷ್ಟ್ರೀಯ ಪೋಷಣ್ ಮಾಸವನ್ನು ಆಚರಿಸಲಾಗುತ್ತಿದ್ದು, ಈ ವರ್ಷ ಕೋವಿಡ್-19 ಸಂದರ್ಭದಲ್ಲಿ ಡಿಜಿಟಲ್ ವಿಧಾನದ ಮೂಲಕ ಅರಿವು ಮೂಡಿಸುವದರ ಜೊತೆಗೆ ಜಿಲ್ಲೆಯಲ್ಲಿನ ಮಕ್ಕಳ ಅಪೌಷ್ಟಿಕತೆ ಹೊಗಲಾಡಿಸುವ ಉದ್ದೇಶದಿಂದ ಜಿಲ್ಲಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೈಗೊಳ್ಳುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಭಗವಂತ ಅನವಾರ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ. ಲಕ್ಷ್ಮೀಕಾಂತ ಸೇರಿದಂತೆ ಜಿಲ್ಲಾ ಸಂಯೋಜಕರಾದ ಗುರುರಾಜ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಮನೀಶ್ ಅವರು ಹಾಜರಿದ್ದರು.