ಯಾದಗಿರಿ:ಶಾಲಾ ವಾಹನದ ಚಕ್ರದಡಿಗೆ ಸಿಲುಕಿ ಬಾಲಕಿಯೋರ್ವಳು ಸಾವನ್ನಪ್ಪಿದ ಮನಕಲುಕುವ ಘಟನೆ ಗುರುಮಠಕಲ್ ಪಟ್ಟಣದ ಲಕ್ಷ್ಮೀನಗರ ಬಡಾವಣೆಯಲ್ಲಿ ಗುರುವಾರ ನಡೆದಿದೆ.
ಶಾಲಾ ವಾಹನದ ಚಕ್ರಕ್ಕೆ ಸಿಲುಕಿ 3 ವರ್ಷದ ಬಾಲಕಿ ಸಾವು - school van news
ಶಾಲಾ ವಾಹನದ ಚಕ್ರಕ್ಕೆ ಸಿಲುಕಿ ಬಾಲಕಿ ಮೃತಪಟ್ಟ ಘಟನೆ ಗುರುಮಠಕಲ್ನಲ್ಲಿ ನಡೆದಿದೆ.
ಶಾಲಾ ವಾಹನದ ಚಕ್ರಕ್ಕೆ ಸಿಲುಕಿ ಬಾಲಕಿ ಸಾವು
ಮನಸ್ವಿನಿ (3) ಮೃತ ಬಾಲಕಿ. ಖಾಸಗಿ ಶಾಲೆಗೆ ಸೇರಿದ ಶಾಲಾ ವಾಹನವು ಮನೆ ಮುಂದೆ ಶಾಲಾ ಮಕ್ಕಳನ್ನು ಇಳಿಸಲು ಬಂದಾಗ ಈ ದುರ್ಘಟನೆ ಸಂಭವಿಸಿದೆ. ಕಣ್ಣ ಮುಂದೆಯೇ ನಡೆದ ದುರ್ಘಟನೆ ಕಂಡು ತಂದೆ-ತಾಯಿ, ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಓದಿ:ವಿಡಿಯೋ: ಮಗುವಿನ ಮೈಮೇಲೆ ಹರಿಯಿತು ಕಾರು: ಚಾಲಕನ ನಿರ್ಲಕ್ಷ್ಯಕ್ಕೆ ಪುಟ್ಟ ಬಾಲಕಿ ಸಾವು )