ಸುರಪುರ (ಯಾದಗಿರಿ) :ತಾಲೂಕಿನಾದ್ಯಂತ ನಾಳೆಯಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಎಲ್ಲಾ ಸಿದ್ಧತೆ ಪೂರ್ಣವಾಗಿದೆ. ನಾಳೆಯಿಂದ ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನ ಓಲೇಕಾರ್ ತಿಳಿಸಿದರು.
ಸುರಪುರದ ಕಂಟೇನ್ಮೆಂಟ್ ಝೋನ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ.. - Free bus system for students
ನಾಳೆಯಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷಗೆ ತಾಲೂಕಿನ ಎಲ್ಲಾ ಕೇಂದ್ರಗಳೂ ಸಿದ್ಧ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಸುರಪುರದ ಕಂಟೇನ್ಮೆಂಟ್ ಝೋನ್ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ: ಬಿಇಓ
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಹಾಗೂ ಕಂಟೇನ್ಮೆಂಟ್ ಝೋನ್‌ಗಳಿಂದ ಬರುವ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ ಎಂದರು.