ಕರ್ನಾಟಕ

karnataka

ETV Bharat / state

ಯಾದಗಿರಿಯಲ್ಲಿ ಇಳಿಮುಖವಾದ ಕೊರೊನಾ : ಇಂದು ಕೇವಲ ಏಳು ಜನರಿಗೆ ಕೊರೊನಾ - Yadgir news

ಯಾದಗಿರಿ ಜಿಲ್ಲೆಯಲ್ಲಿಂದು ಕೇವಲ ಏಳು ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಕೋವಿಡ್ ಪ್ರಕರಣಗಳ ಸಂಖ್ಯೆ ದಿನ ಕಳೆದಂತೆ ಇಳಿಮುಖ ಕಾಣುತ್ತಿದೆ. ಹಾಗೂ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

seven corona cases in yadagiri
ಯಾದಗಿರಿಯಲ್ಲಿ ಇಳಿಮುಖನಾದ ಕೊರೊನಾ : ಇಂದು ಕೇವಲ ಏಳು ಜನರಿಗೆ ಕೊರೊನಾ

By

Published : Nov 3, 2020, 9:57 PM IST

ಯಾದಗಿರಿ: ಜಿಲ್ಲೆಯಲ್ಲಿಂದು ಕೇವಲ ಏಳು ಜನರಿಗೆ ಕೊರೊನಾ ಸೋಂಕು ಧೃಡಪಟ್ಟಿದ್ದು, ಕೋವಿಡ್ ಪ್ರಕರಣಗಳ ಸಂಖ್ಯೆ ದಿನ ಕಳೆದಂತೆ ಇಳಿಮುಖ ಕಾಣುತ್ತಿದೆ. ಹಾಗೂ ಸೋಂಕಿನಿಂದ ಗುಣಮುಖರಾದವರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಕೋವಿಡ್ ಸೋಂಕಿನಿಂದ ಆಸ್ಪತ್ರೆಗಳಲ್ಲಿ ದಾಖಲಾದವರಲ್ಲಿ ಇಂದು 29 ಜನ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್​​ ಹೊಂದಿದ್ದು, ಈ ಮೂಲಕ ಇದುವರೆಗೆ 9878 ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೊರೊನಾ ಸೋಂಕಿನಿಂದ ಒಟ್ಟು 61 ಜನ ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 10116 ಕ್ಕೆ ತಲುಪಿದೆ.

ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 177 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details