ಯಾದಗಿರಿ: ಜಿಲ್ಲೆಯ ಶಹಾಪುರ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿದಿದೆ.
ಶಹಾಪುರ ನಗರಸಭೆ ಚುನಾವಣೆ: ಅಧಿಕಾರ ಚುಕ್ಕಾಣಿ ಹಿಡಿದ ಕಾಂಗ್ರೆಸ್ - ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ
ಯಾದಗಿರಿ ಜಿಲ್ಲೆಯ ಶಹಾಪುರ ನಗರಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರಾದ ಸಹನಾಜ್ ಬೇಗಂ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಭೀಮಾಬಾಯಿ ಅವಿರೋಧವಾಗಿ ಆಯ್ಕೆಯಾದರು.
ಶಹಾಪುರ ನಗರಸಭೆ ಚುನಾವಣೆ
ಇಂದು ಶಹಾಪುರ ನಗರಸಭೆಯ 9 ನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯ ಚುನಾವಣೆ ಯಾದಗಿರಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ನೇತೃತ್ವದಲ್ಲಿ ನಡೆಸಲಾಯಿತು. ಚುನಾವಣೆ ಅಧಿಕಾರಿ ಶಂಕರಗೌಡ ಸೋಮನಾಳ ಅವರು ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಿದರು. ಕಾಂಗ್ರೆಸ್ ಪಕ್ಷದ ನಗರಸಭೆ ಸದಸ್ಯರಾದ ಸಹನಾಜ್ ಬೇಗಂ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಭೀಮಾಬಾಯಿ ಅವಿರೋಧವಾಗಿ ಆಯ್ಕೆಯಾದರು.
ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಸನ್ಮಾನಿಸಿ ಗೌರವಿಸಿದರು.
Last Updated : Oct 31, 2020, 7:20 PM IST