ಗುರುಮಠಕಲ್: ವೇಗವಾಗಿ ಬೆಳೆಯುತ್ತಿರುವ ಪಟ್ಟಣದ ಅಗತ್ಯಕ್ಕೆ ತಕ್ಕಂತೆ ಮುಂಬರುವ ದಿನಗಳಲ್ಲಿ ಅಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ರಾಜ್ಯ ಜೆಡಿಎಸ್ ಯುವ ಮುಖಂಡ ಶರಣಗೌಡ ಕಂದಕೂರ ಹೇಳಿದರು.
ಪಟ್ಟಣದ ವಾರ್ಡ್ ನಂ 20 ಮಜ್ಜಿಗೇರಿ ಬಡಾವಣೆಯ ಆಂಜನೇಯ ದೇವಸ್ಥಾನದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಸರ್ಕಾರ ಯೋಜನೆಗಳು ಮತ್ತು ಅನುದಾನಗಳ ಸದ್ಬಳಕೆಯಿಂದ ಜನರ ಸಮಸ್ಯೆಗಳನ್ನು ನೀಗಿಸುವ ಕಾರ್ಯವನ್ನು ಶಾಸಕ ನಾಗನಗೌಡ ಕಂದಕೂರು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ ಎಂದರು.