ಯಾದಗಿರಿ:ಸಚಿವ ಕೆಎಸ್ ಈಶ್ವರಪ್ಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಏಕಾಏಕಿಯಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೆಲ ಕಾಲ ಕರೆಂಟ್ ಇಲ್ಲದೆ ಕತ್ತಲಲ್ಲಿ ಕಾರ್ಯಕ್ರಮ ನಡೆಸುವಂತಾಯಿತು.
ಸಚಿವ ಈಶ್ವರಪ್ಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್! - ಕೆ.ಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ನರೇಗಾ ಯೋಜನೆಯಡಿಯಲ್ಲಿನ ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಯಾದಗಿರಿಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಆಗಮಿಸಿದ್ದರು. ಈ ಸಂದರ್ಭದಲ್ಲಿ ಯಾದಗಿರಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆದ ನರೇಗಾ ಯೋಜನೆಯ ಅಂತರ್ಜಾಲ ಚೇತನ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಪಾಲ್ಗೊಂಡಿದ್ದರು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಸ್ವಲ್ಪ ಸಮಯ ಕರೆಂಟ್ ಇಲ್ಲದೇ ಕಾರ್ಯಕ್ರಮ ನಡೆಸಬೇಕಾಯಿತು.
ಕತ್ತಲಲ್ಲೇ ಸಚಿವ ಈಶ್ವರಪ್ಪ ಕಾರ್ಯಕ್ರಮದ ಭಾಷಣ ಪ್ರಾರಂಭಿಸುವ ಮೂಲಕ ಶಾರ್ಟ್ ಸರ್ಕ್ಯೂಟ್ ಸ್ಥಳದಲ್ಲಿ ಕುಳಿತವರನ್ನ ಅಲ್ಲಿಂದ ಬೇರೆಡೆ ಸ್ಥಳಾಂತರ ಆಗುವಂತೆ ಮನವಿ ಮಾಡಿದರು.ಈ ಸಂದರ್ಭದಲ್ಲಿ ಅವರು ಜೆಸ್ಕಾಂ ಅಧಿಕಾರಿಗಳಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸರಿಪಡಿಸುವಂತೆ ಆದೇಶ ಕೂಡ ಮಾಡಿದರು.