ಯಾದಗಿರಿ: ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯಲ್ಲಿ ನಡೆದಿದೆ. ದಂಪತಿ ಹಾಗೂ ನಾಲ್ವರು ಮಕ್ಕಳು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಹಾಪುರದಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ..! - ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ,
ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
![ಶಹಾಪುರದಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ..! ಶಹಾಪುರದಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ](https://etvbharatimages.akamaized.net/etvbharat/prod-images/768-512-12289583-878-12289583-1624883700000.jpg)
ಶಹಾಪುರದಲ್ಲಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ
ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ
ಭೀಮರಾಯ ಸುರಪುರ(45), ಪತ್ನಿ ಶಾಂತಮ್ಮ(36), ಮಕ್ಕಳಾದ ಸುಮಿತ್ರಾ (12), ಶ್ರೀದೇವಿ, ಲಕ್ಷ್ಮೀ, ಶಿವರಾಜ್ ಮೃತರು. ಸ್ಥಳಕ್ಕೆ ಶಹಾಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ವರ ಮೃತದೇಹ ಹೊರತೆಗೆದಿದ್ದು, ಇಬ್ಬರ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಇವರೆಲ್ಲರೂ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
Last Updated : Jun 28, 2021, 6:08 PM IST