ಯಾದಗಿರಿ:ಕೊರೊನಾ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನರ ಸೇವೆ ಮಾಡುವಂತಾಗಲಿ ಎಂದು ಹಾರೈಸಿ ನಗರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಯಾದಗಿರಿ: ಶಾಸಕರಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ
ನಗರದ ಕನಕ ವೃತ್ತದ ಸಮೀಪದ ಬಾಲಾಜಿ ಮಂದಿರದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಬೇಗ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಲಾಯಿತು.
ಶಾಸಕರಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ
ನಗರದ ಕನಕ ವೃತ್ತದ ಸಮೀಪದ ಬಾಲಾಜಿ ಮಂದಿರದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಭೀಮು ಪೂಜಾರಿ ಹಾಗೂ ದೀಪಕ್ ಎಂಬುವರ ನೇತೃತ್ವದಲ್ಲಿ ಈ ವಿಶೇಷ ಪೂಜೆ ನಡೆಸಲಾಯಿತು. ಭೀಮು ಪೂಜಾರಿ ಈ ವೇಳೆ ಉರುಳು ಸೇವೆ ಸಲ್ಲಿಸಿದರು.
ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ಬೆಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಹಿನ್ನೆಲೆ ಅವರ ಅಭಿಮಾನಿಗಳು ಬೇಗ ಗುಣಮುಖರಾಗಲಿ ಅಂತ ಹಾರೈಸಿ ಮಂದಿರದಲ್ಲಿ ಪೂಜೆ ಮಾಡಿದರು.