ಯಾದಗಿರಿ: ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ವೇತನ ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ನಗರದಲ್ಲಿಂದು AIDSO ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಕನಕ ವೃತ್ತದ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗಿಯಾಗಿದ್ದರು.
ವಿದ್ಯಾರ್ಥಿ ವೇತನ ಕಡಿತ: ಯಾದಗಿರಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ, ಸರ್ಕಾರದ ಆದೇಶಕ್ಕೆ ಆಕ್ರೋಶ - ಯಾದಗಿರಿಯಲ್ಲಿಂದು AIDSO ವತಿಯಿಂದ ಪ್ರತಿಭಟನೆ
ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ವೇತನ ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ, ಯಾದಗಿರಿಯಲ್ಲಿಂದು AIDSO ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2ನೇ ತರಗತಿಯಿಂದ 10ನೇ ತರಗತಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿತ್ತು. ಆದ್ರೆ ಇದೀಗ ಅನುದಾನ ಕೊರತೆಯ ನೆಪವೊಡ್ಡಿ ಸರ್ಕಾರ ನವೀಕರಣಗೊಂಡ 8ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಿದೆ. ಈ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳನ್ನ ವಂಚಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ವೇತನ ಕಡಿತಗೊಳಿಸುತ್ತಿರುವ ರಾಜ್ಯ ಸರ್ಕಾರ, ತನ್ನ ಆದೇಶವನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
TAGGED:
Student Protest in Yadgir