ಸುರಪುರ: ಹತ್ತನೆ ತರಗತಿ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹುಣಸಗಿ ತಾಲೂಕಿನ ಮಾರಲಬಾವಿ ಗ್ರಾಮದ ವಿದ್ಯಾರ್ಥಿನಿ ಸುಮತಿ ನಿಂಗಣ್ಣ ಕಲ್ಯಾಣಿ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಹುಣಸಗಿ ತಾಲೂಕಿನ ರಾಜನಕೊಳೂರ ಗ್ರಾಮದ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು ಮೊನ್ನೆ ನಡೆದ ಹತ್ತನೆ ತರಗತಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ಸಾಮಾಜಿಕ ವಿಜ್ಞಾನ ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದು ಇದರಿಂದ ಮನನೊಂದು ಸೋಮವಾರ ಸಂಜೆ ಮಾರಲಬಾವಿಯ ತಮ್ಮ ಮನೆಯಲ್ಲಿ ವಿಷ ಸೇವಿಸಿದ್ದಾಳೆ.
ವಿಷ ಸೇವಿಸಿದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳಿದಿರುವುದಾಗಿ ತಿಳಿದು ಬಂದಿದೆ.