ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿಸಿದ ಬಸ್ ಚಾಲಕ, ನಿರ್ವಾಹಕರಿಗೆ ವಿದ್ಯಾರ್ಥಿಗಳಿಂದ ಸನ್ಮಾನ - students gratitude to bus drivers and conductors
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲು ದಿನನಿತ್ಯ ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಸುರಕ್ಷಿತವಾಗಿ ಕರೆದೊಯ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಇಂದು ಯಶಸ್ವಿಯಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳು ಸನ್ಮಾನ ಮಾಡಿದ್ರು.

ಬಸ್ ಚಾಲಕ,ನಿರ್ವಾಹಕರಿಗೆ ವಿದ್ಯಾರ್ಥಿಗಳಿಂದ ಸನ್ಮಾನ
ಸುರಪುರ: 10ನೇ ತರಗತಿ ಪರೀಕ್ಷೆಗೆ ನಿತ್ಯವೂ ಸಮಯಕ್ಕೆ ಸರಿಯಾಗಿ ಕರೆದೊಯ್ದ ಸಾರಿಗೆ ಇಲಾಖೆ ಚಾಲಕ ಮತ್ತು ನಿರ್ವಾಹಕರಿಗೆ ಬಿಇಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸನ್ಮಾನ ಮಾಡಿದ್ರು.
ಬಸ್ ಚಾಲಕ,ನಿರ್ವಾಹಕರಿಗೆ ವಿದ್ಯಾರ್ಥಿಗಳಿಂದ ಸನ್ಮಾನ
ಬೆಳಗ್ಗೆ 5 ಗಂಟೆಗೆ ಬಸ್ಗಳನ್ನು ತೆಗೆದುಕೊಂಡು ಹೊರಟು ತಾಲೂಕಿನ ಕಟ್ಟಕಡೆಯ ಗ್ರಾಮದವರಿಗೆ ತಲುಪಿ ಮಕ್ಕಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದು ಪರೀಕ್ಷೆ ಮುಗಿದ ನಂತರ ಪುನಃ ಅವರವರ ಊರುಗಳಿಗೆ ತಲುಪಿಸುವಂತ ಬಹುದೊಡ್ಡ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆಗೆ ಎಲ್ಲ ಮಕ್ಕಳ ಪರವಾಗಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬಸ್ಸಿನ ಚಾಲಕ ಮತ್ತು ನಿರ್ವಾಹಕರಿಗೆ ಶಾಲು ಹೊದಿಸಿ ಹೂಮಾಲೆ ಹಾಕಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.