ಸುರಪುರ(ಯಾದಗಿರಿ): ನಗರದ ತಿಮ್ಮಾಪುರ ಬಳಿಯ ಖಾದಿ ಕೇಂದ್ರದ ಹಿಂಬದಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸುರಪುರ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ - ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ
ತಿಮ್ಮಾಪುರ ಬಳಿಯ ಖಾದಿ ಕೇಂದ್ರದ ಹಿಂಬದಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸುರಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಿಮ್ಮಾಪುರದ ವಡ್ಡರ ಓಣಿಯ ನಂದಪ್ಪ (ತಂದೆ ತಿಮ್ಮಯ್ಯ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೃತ ವ್ಯಕ್ತಿಗೆ ಹೆಂಡತಿ, ಇಬ್ಬರು ಮಕ್ಕಳಿದ್ದು, ಆತ ಕುಡಿತದ ಚಟಕ್ಕೆ ಒಳಗಾಗಿದ್ದ. ಜೊತೆಗೆ ಜೀವನದಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಖಾದಿ ಕೇಂದ್ರದ ಹಿಂಬದಿಯಲ್ಲಿ ಜನರು ಬೆಳಿಗ್ಗೆ ಬಹಿರ್ದೆಸೆಗೆ ಹೋದಾಗ ಮರದಲ್ಲಿ ವ್ಯಕ್ತಿಯ ಶವ ನೇತಾಡುತ್ತಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಸುರಪುರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೀವನದಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದ್ದು, ನಿಖರ ಕಾರಣ ಏನೆಂದು ತನಿಖೆಯ ಬಳಿಕ ತಿಳಿಯಲಿದೆ.