ಸುರಪುರ (ಯಾದಗಿರಿ): ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಉಪ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರೈತರ ಒಕ್ಕಲೆಬ್ಬಿಸಲು ತಂದಿರುವ ಕಾಯಿದೆಗಳನ್ನು ಕೂಡಲೆ ಕೈ ಬಿಡುವಂತೆ ಆಗ್ರಹಿಸಿದರು.
ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಸುರಪುರ ರೈತರಿಂದ ಪ್ರತಿಭಟನೆ - Surapur farmers protest
ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಉಪ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಚ್.ಆರ್. ಬಡಿಗೇರ ಮಾತನಾಡಿ, ಸರ್ಕಾರ ಇಂದು ಭೂ ಸುಧಾರಣೆ ಕಾಯಿದೆ ತಿದ್ದುಪಡಿ ಹೆಸರಲ್ಲಿ ಬಡ ರೈತರನ್ನು ನಿರ್ನಾಮ ಮಾಡುವ ಉದ್ದೇಶ ಹೊಂದಿದೆ. ವಿದ್ಯುತ್ ಕಾಯಿದೆ ಮೂಲಕ ರೈತರಿಗೆ ಸರಿಯಾಗಿ ವಿದ್ಯುತ್ ದೊರೆಯದಂತೆ ಮಾಡಲಾಗುತ್ತಿದೆ. ಎಪಿಎಂಸಿ ಕಾಯಿದೆ ಜಾರಿಗೊಳಿಸುವ ಮೂಲಕ ರೈತರಿಗೆ ಸರಿಯಾದ ಮಾರುಕಟ್ಟೆ ಸಿಗದಂತೆ ಮಾಡಲಾಗುತ್ತಿದೆ. ಈ ಎಲ್ಲಾ ಕಾಯಿದೆಗಳನ್ನು ಸರ್ಕಾರ ಕೂಡಲೆ ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ಉಪ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಈ ಸಂಬಂಧ ಮನವಿ ಸಲ್ಲಿಸಲಾಯಿತು.