ಸುರಪುರ(ಯಾದಗಿರಿ):ತಾಲೂಕಿನ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಏವೂರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಲಾಯಿತು.
ಬೇಡಿಕೆಗಳ ಈಡೇರಿಕೆಗೆ ಒತ್ತಾಯ.. ಸುರಪುರ ತಾಲೂಕು ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ - Protest in Surapur
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸುರಪುರ ತಾಲೂಕಿನ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಏವೂರ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ.. ಸುರಪುರ ತಾಲೂಕು ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ.. ಸುರಪುರ ತಾಲೂಕು ಗ್ರಾಪಂ ನೌಕರರ ಸಂಘದಿಂದ ಪ್ರತಿಭಟನೆ
ಈ ಸಂದರ್ಭದಲ್ಲಿ ಮುಖಂಡ ಎಂ.ಎಂ. ನದಾಫ್ ಮಾತನಾಡಿ, ಸರ್ಕಾರದ ನಾಲ್ಕನೇ ಹಣಕಾಸು ಅನುದಾನದ ಶೇ.10 ರಷ್ಟು ಹಣದಲ್ಲಿ ಗ್ರಾಮ ಪಂಚಾಯಿತಿ ನೌಕರರ ವೇತನ ನೀಡಬೇಕು. ನಿವೃತ್ತಿ ಹೊಂದಿದ ಗ್ರಾಮ ಪಂಚಾಯಿತಿ ನೌಕರರಿಗೆ ಉಪಧನ ನೀಡಬೇಕು. ಪಂಪ್ ಆಪರೇಟರ್ಗಳನ್ನು ಬಿಲ್ ಕಲೆಕ್ಟರ್ಗಳಾಗಿ ಮುಂಬಡ್ತಿ ನೀಡಬೇಕು ಎನ್ನುವುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.