ಸುರಪುರ:ಕೃಷ್ಣಾ ನದಿಗೆ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವ ಘಟನೆ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ನಡೆದಿದೆ.
ಸುರಪುರ: ಈಜಲು ತೆರಳಿದ್ದ ಯುವಕ ನೀರುಪಾಲು
ನದಿಯಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸುರಪುರ ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ನಡೆದಿದೆ.
ಯುವಕ ನೀರುಪಾಲು
ಮಹಾಂತೇಶ ನಂದಪ್ಪ ಕವಡಿಮಟ್ಟಿ (19)ಮೃತ ಯುವಕ. ವಾಗಣಗೇರಾ ಗ್ರಾಮದ ಜನರು ಹನುಮಾನ್ ದೇವರ ಕಾರ್ತಿಕೋತ್ಸವದ ನಿಮಿತ್ತ ಸೆಳ್ಳಗಿ ಬಳಿಯ ಕೃಷ್ಣಾ ನದಿಗೆ ದೇವರ ಗಂಗಾಸ್ನಾನಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಹಾಂತೇಶ ಈಜಲು ಹೋಗಿದ್ದು, ನೀರಿನಲ್ಲಿ ಕೊಚ್ಚಿಹೋಗಿದ್ದಾನೆ.
ಇನ್ನು ಮಹಾಂತೇಶ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಸಿದ ಬಳಿಕ ಸ್ಥಳದಿಂದ ಅರ್ಧ ಕಿ.ಮೀ ದೂರದಲ್ಲಿ ಶವ ಪತ್ತೆಯಾಗಿದೆ. ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಆಕಂದ್ರನ ಮುಗಿಲು ಮುಟ್ಟಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.