ಸುರಪುರ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ತಾಲೂಕು ಅಂಗನವಾಡಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯ್ತು.
ಸುರಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ - Surapur Protest Latest News
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಸುರಪುರ ತಾಲೂಕು ಅಂಗನವಾಡಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯ್ತು.
ಈ ಸಂದರ್ಭದಲ್ಲಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಖಾ ಕುಲಕರ್ಣಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಬಳವನ್ನು ಪ್ರತಿ ತಿಂಗಳ 5ನೇ ತಾರೀಖಿನ ಒಳಗೆ ನೀಡಬೇಕು. ಪ್ರತಿ ತಿಂಗಳು ಮೊಟ್ಟೆ, ತರಕಾರಿ ಬಿಲ್ಲುಗಳನ್ನು ಕಾರ್ಯಕರ್ತೆಯರೆ ಮುಂಗಡವಾಗಿ ನೀಡಿ ಖರೀದಿಸಿ ಹಂಚುತ್ತಾರೆ. ಅಲ್ಲದೆ ಇಲ್ಲಿಯವರೆಗೆ ಮೊಟ್ಟೆಯ ಬಿಲ್ಲು ನೀಡಿಲ್ಲ. ಕೂಡಲೆ ಮೊಟ್ಟೆ ತರಕಾರಿ ಬಿಲ್ಲು ಹಾಗೂ ಸಂಬಳವನ್ನು ನೀಡಬೇಕು ಎಂದು ಒತ್ತಾಯಿಸಿದರು.
ನಿಯಮದಂತೆ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಮುಂಬಡ್ತಿ ನೀಡಬೇಕು ಹಾಗೂ ನಿವೃತ್ತಿ ಹೊಂದಿರುವ ಕಾರ್ಯಕರ್ತೆಯರ ನಿವೃತ್ತಿ ಹಣ ಕೂಡಲೆ ನೀಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪ ತಹಶೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.