ಸುರಪುರ :ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಅಧಿಕಾರದ ಗದ್ದುಗೆ ಹಿಡಿದರು. ಕಳೆದ ಎರಡು ಅವಧಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಿಂಗಣ್ಣ ಬಾಧ್ಯಪೂರ್ 40 ತಿಂಗಳು ಅಧಿಕಾರ ನಡೆಸಿದ್ದು, ಇನ್ನುಳಿದ 20 ತಿಂಗಳ ಅವಧಿಗೆ ಚುನಾವಣೆ ಘೋಷಿಸಲಾಗಿತ್ತು.
ಸುರಪುರ ಎಪಿಎಂಸಿಗೆ ಬಿಜೆಪಿ ಬೆಂಬಲಿತರು ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ..
ಬಿಜೆಪಿ ಕಾರ್ಯಕರ್ತರು ಎಪಿಎಂಸಿ ಕಚೇರಿ ಬಳಿಯಲ್ಲಿ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಯುವ ಮುಖಂಡ ಹನುಮಂತ ನಾಯಕ ಬಬ್ಲುಗೌಡ ಹಾಗೂ ಎಪಿಎಂಸಿ ವತಿಯಿಂದ ಸನ್ಮಾನಿಸಿ ಶುಭ ಕೋರಿದರು.
ಇಂದು ಬೆಳಗ್ಗೆ 11:00 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿಪಡಿಸಲಾಗಿತ್ತು. ಆದರೆ, ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಹುಣಸಗಿ ಕ್ಷೇತ್ರದ ದೇವಣ್ಣ ಮಲಗಲದಿನ್ನಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸುರಪುರ ಕ್ಷೇತ್ರದ ದುರ್ಗಪ್ಪ ಗೋಗಿಕರರನ್ನು ಚುನಾವಣಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ಘೋಷಿಸಿದರು.
ನಂತರ ಬಿಜೆಪಿ ಕಾರ್ಯಕರ್ತರು ಎಪಿಎಂಸಿ ಕಚೇರಿ ಬಳಿಯಲ್ಲಿ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು. ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಯುವ ಮುಖಂಡ ಹನುಮಂತ ನಾಯಕ ಬಬ್ಲುಗೌಡ ಹಾಗೂ ಎಪಿಎಂಸಿ ವತಿಯಿಂದ ಸನ್ಮಾನಿಸಿ ಶುಭ ಕೋರಿದರು.