ಸುರಪುರ (ಯಾದಗಿರಿ): ದಿನಕಳೆದಂತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸುವುದು ಅವಶ್ಯಕವಾಗಿದೆ. ಆದ್ದರಿಂದ ಈ ಬಾರಿಯ ರಂಜಾನ್ ಹಬ್ಬವನ್ನು ಮನೆಯಲ್ಲೇ ಆಚರಿಸುವಂತೆ ತಹಶೀಲ್ದಾರ್ ನಿಂಗಣ್ಣ ಬಿರಾದಾರ್ ಮುಸ್ಲಿಂ ಬಾಂಧವರಿಗೆ ಮನವಿ ಮಾಡಿದ್ದಾರೆ.
ನಗರದ ಪೊಲೀಸ್ ಠಾಣೆಯಲ್ಲಿ ನಡೆದ ರಂಜಾನ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ನಿಂಗಣ್ಣ ಬಿರಾದಾರ್, ರಂಜಾನ್ ಮನೆಯಲ್ಲಿ ಆಚರಿಸಿದರೆ ನಿಮ್ಮನ್ನು ನೀವು ರಕ್ಷಣೆ ಮಾಡಿಕೊಂಡಂತೆ. ಕೊರೊನಾ ನಿರ್ಮೂಲನೆಗೆ ಮನೆಯಲ್ಲಿ ಇರುವುದು ಅತ್ಯವಶ್ಯಕವಾಗಿದೆ ಎಂದರು.