ಯಾದಗಿರಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಈಜುಕೊಳವನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ.ಪಾಟೀಲ್ ಉದ್ಘಾಟಿಸಿದರು.
ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿ ಮೀಸಲಿಟ್ಟ ಒಂದು ಎಕರೆ ಜಮೀನಿನ 460 ಚದರ ಮೀಟರ್ ವ್ಯಾಪ್ತಿಯಲ್ಲಿ ಕ್ರೀಡಾ ಇಲಾಖೆ ಈ ಈಜುಕೊಳ ನಿರ್ಮಿಸಿದೆ. ಈ ಈಜುಕೊಳದಲ್ಲಿ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾ ಪ್ರಭಾರ ಸಹಾಯಕ ನಿರ್ದೇಶಕ ಚನ್ನಬಸಣ್ಣ ಕುಳಗೇರಿ ತಿಳಿಸಿದರು.