ಯಾದಗಿರಿ:ಶವಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಟಂಟಂ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಶಹಪುರ ನಗರದ ಚಾಂದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಅಂತ್ಯಕ್ರಿಯೆಗೆ ಹೊರಟಿದ್ದಾಗ ಅಪಘಾತ: ಮಹಿಳೆ ಸಾವು - ಲೆಟೆಸ್ಟ್ ಯಾದಗಿರಿ ನ್ಯೂಸ್
ಶವಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಟಂಟಂ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಹಪುರ ನಗರದ ಚಾಂದ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
![ಅಂತ್ಯಕ್ರಿಯೆಗೆ ಹೊರಟಿದ್ದಾಗ ಅಪಘಾತ: ಮಹಿಳೆ ಸಾವು](https://etvbharatimages.akamaized.net/etvbharat/prod-images/768-512-4948548-thumbnail-3x2-death.jpg)
ಅಂತ್ಯಕ್ರಿಯೆಗೆ ಹೊರಟವರ ಜೀವವೇ ಅಂತ್ಯವಾಯಿತು....!!
ಕಾಶಿಬಾಯಿ (55) ಅಪಘಾತದಲ್ಲಿ ಮೃತಪಟ್ಟಿದ್ದು, ಟಂಟಂ ಚಾಲಕ ಸೇರಿದಂತೆ ಸಿದ್ರಾಮವ್ವ ಎಂಬ ಮಹಿಳೆಗೆ ಗಂಭೀರ ಗಾಯಗಳಾದ ಹಿನ್ನೆಲೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮಹಿಳೆ ಸುರಪುರ ತಾಲೂಕಿನ ಯಾಳಗಿ ಗ್ರಾಮದವರಾಗಿದ್ದು, ಶಹಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸದ್ಯ ಈ ಕುರಿತು ಶಹಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.