ಯಾದಗಿರಿ:ಮಳೆರಾಯನ ಆರ್ಭಟಕ್ಕೆ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ ನದಿ ತೀರದ ಕಂಗಳೇಶ್ವರ ಹಾಗೂ ವೀರಾಂಜನೇಯ ದೇವಸ್ಥಾನಗಳು ನೀರಿನಲ್ಲಿ ಮುಳುಗಿವೆ.
ಯಾದರಿಗಿಯ ಕಂಗಳೇಶ್ವರ, ವೀರಾಂಜನೇಯ ದೇವಸ್ಥಾನಗಳು ಜಲಾವೃತ - ಮಳೆಗೆ ಯಾದಗಿರಿ ವೀರಾಂಜನೇಯ ದೇವಾಲಯ ಮುಳುಗಡೆ
ವರುಣನ ಅಬ್ಬರಕ್ಕೆ ಯಾದಗಿರಿ ಜಿಲ್ಲೆ ಸಂಪೂರ್ಣ ತತ್ತರಿಸಿದೆ. ನದಿಗಳು ತುಂಬಿ ಹರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಕಂಗಳೇಶ್ವರ ಹಾಗೂ ವೀರಾಂಜನೇಯ ದೇವಸ್ಥಾನಗಳು ಮುಳುಗಡೆಯಾಗಿವೆ.
ಯಾದಗಿರಿ ನಗರದ ಹೊರಭಾಗದ ಭೀಮಾ ನದಿ ಉಕ್ಕಿ ಹರಿಯತ್ತಿರುವುದರಿಂದ ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಳೆದ ಮೂರು ದಿನಗಳಿಂದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಜೋರು ಮಳೆಯಿಂದ ಕಲಬುರಗಿ ಜಿಲ್ಲೆಯ ಸನ್ನತಿ ಬ್ರಿಡ್ಜ್ ಕಮ್ ಬ್ಯಾರೇಜ್ನಿಂದ ಭೀಮಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿ ಬಿಡಲಾಗುತ್ತಿದ್ದು, ಭೀಮಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಇನ್ನೂ ಮಳೆ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಭೀಮಾ ತೀರದ ಜನರಲ್ಲಿ ಆತಂಕ ಶುರುವಾಗಿದೆ
ನದಿಪಾತ್ರದ ಕಡೆ ಜನ ಜಾನುವಾರುಗಳು ತೆರಳದಂತೆ ಜಿಲ್ಲಾಡಳಿತ ಕೂಡ ಎಚ್ಚರಿಕೆ ನೀಡಿದೆ.