ಯಾದಗಿರಿ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಪುತ್ರನನ್ನು ಹತ್ಯೆ ಮಾಡಿರುವ ಘಟನೆ ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದ ಬಳಿ ನಡೆದಿದೆ.
ಯಾದಗಿರಿ ಬಳಿ ಗ್ರಾಪಂ ಮಾಜಿ ಅಧ್ಯಕ್ಷ, ಪುತ್ರನ ಬರ್ಬರ ಹತ್ಯೆ - kannadanews
ತಂದೆ ಹಾಗೂ ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದ ಬಳಿ ನಡೆದಿದೆ.
ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದ ಬಳಿ ಜೋಡಿ ಕೊಲೆ
ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹತ್ತಿಕುಣಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶರಣಪ್ಪ ಗಡ್ಡೀಮನಿ ಪೂಜಾರಿ (55), ಪುತ್ರ ಮಹಾದೇವಪ್ಪ (29) ಕೊಲೆಯಾದವರು ಎಂದು ಗುರುತಿಸಲಾಗಿದೆ. ಯಾದಗಿರಿ ಸಮೀಪದ ಹತ್ತಿಕುಣಿ ತೋಟಗಾರಿಕಾ ಪ್ರದೇಶ ಬಳಿ ಈ ಕೊಲೆ ನಡೆದಿದ್ದು, ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಸ್ತಿ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.