ಯಾದಗಿರಿ: ನಾಡ ಬಂದೂಕು ಸಿಡಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಮೂವರು ಪೊಲೀಸ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿ ಎಸ್ಪಿ ಡಾ. ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
ನಾಡ ಬಂದೂಕು ಸಿಡಿಸಿ ಕೇಂದ್ರ ಸಚಿವರಿಗೆ ಸ್ವಾಗತ ಪ್ರಕರಣ: ಮೂವರು ಕಾನ್ಸ್ಟೇಬಲ್ ಅಮಾನತು! - using of gun for welcomed
ನಿನ್ನೆ ನಾಡ ಬಂದೂಕು ಸಿಡಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುವರು ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ನಾಡಬಂದೂಕು ಸಿಡಿಸಿ ಕೇಂದ್ರ ಸಚಿವರಿಗೆ ಸ್ವಾಗತ ಪ್ರಕರಣ
ಪೊಲೀಸ್ ಕಾನ್ಸ್ಟೇಬಲ್ ಗಳಾದ ವಿರೇಶ್, ಸಂತೋಷ ಹಾಗೂ ಮೈಬೂಬ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ವೇದಮೂರ್ತಿ ಮಾಹಿತಿ ನೀಡಿದ್ದಾರೆ. ನಿನ್ನೆ ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆಯೊಂದಿಗೆ ಯರಗೋಳ ಗ್ರಾಮಕ್ಕೆ ಆಗಮಿಸಿದಾಗ ನಾಡಬಂದೂಕು ಸಿಡಿಸಿ ಸ್ವಾಗತ ಮಾಡಲಾಗಿತ್ತು. ಅಲ್ಲದೇ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ಕೂಡಾ ದಾಖಲಾಗಿದೆ.