ಯಾದಗಿರಿ: ಮನೆ ಛಾವಣಿ ಕುಸಿದು ಬಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ವಾರ್ಡ್ ನಂ ಮೂರರಲ್ಲಿ ವಾಸವಿರುವ ಮಲ್ಲಪ್ಪ ಎಂಬುವವರ ಮನೆಯಲ್ಲಿ ಈ ಘಟನೆ ಜರುಗಿದೆ. ಕಳೆದ ಮೂರು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದ ಮನೆ ಛಾವಣಿ ನೆನದು ಕುಸಿದು ಬಿದ್ದಿದೆ ಎನ್ನಲಾಗುತ್ತಿದೆ.