ಸುರಪುರ(ಯಾದಗಿರಿ):ನಗರದ ಪಾಲಿಟೆಕ್ನಿಕ್ ಕಾಲೇಜು ವಸತಿ ನಿಲಯಗಳು ಸೇರಿ ಎಂಟು ಕ್ವಾರಂಟೈನ್‌ಗಳಲ್ಲಿರುವ 158ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನಿಸಲಾಗಿದೆ.
ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ ಮಾಹಿತಿ ನೀಡಿ, ಸರ್ಕಾರದ ನಿರ್ದೇಶನದಂತೆ ಕ್ವಾರಂಟೈನಲ್ಲಿರುವವರಲ್ಲಿನ 10 ವರ್ಷದ ಒಳಗಿನ ಮಕ್ಕಳು, 80 ವರ್ಷ ಮೇಲ್ಪಟ್ಟ ವ್ಯಕ್ತಿಗಳು, ಗರ್ಬಿಣಿ ಹಾಗೂ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಂದ ಬಳಲುತ್ತಿರುವವರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.